ಬೆಂಗಳೂರು: 6 ತಿಂಗಳ ಬಳಿಕ ನಟ ದರ್ಶನ್ (Darshan) ಮತ್ತು ಪವಿತ್ರಾ ಗೌಡ (Pavithra Gowda) ಕೋರ್ಟ್‌ನಲ್ಲಿ ಶುಕ್ರವಾರ (ಜ.10) ಮುಖಾಮುಖಿಯಾಗಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಖುದ್ದು ಎಲ್ಲಾ ಆರೋಪಿಗಳ ಹಾಜರಾತಿಗೆ ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಆದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ- ದರ್ಶನ್ ಭೇಟಿಯಾಗಿಲ್ಲ. ಈ ಹಿಂದೆ ಕೋರ್ಟ್ (Court) ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು. ಇದನ್ನೂ ಓದಿ: ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ – ಚೆಮ್ಮನೂರ್ ಮಾಲೀಕ ಅರೆಸ್ಟ್
ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿತ್ತು.
ಜಾಮೀನು ಸಿಕ್ಕಿದ್ದು ಹೇಗೆ?
ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.