ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ(Renukaswamy Murder Case) ಆರೋಪಿಗಳಾದ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ (High Court) ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ (ಆ.14) ತೀರ್ಮಾನವಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿತ್ತು. ವಾದ, ಪ್ರತಿವಾದ ಆಲಿಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್ ವಾದ ಏನು?
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ
ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಜಾಮೀನು ನೀಡಲು ಹೇಗಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ. ಹೈಕೋರ್ಟ್ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.