ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್‌ಗೆ (Darshan) ಇಂದು ಮಹತ್ವದ ದಿನವಾಗಿದ್ದು, ಜಾಮೀನು (Bail) ಅರ್ಜಿ ವಿಚಾರಣೆ ನಡೆಯಲಿದೆ.
ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ (Ballari Central Jail) 26 ದಿನಗಳಿಂದ ಮುದ್ದೆ ಮುರಿಯುತ್ತಿದ್ದಾರೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ
ಇನ್ನು ಆರೋಪಿ ದರ್ಶನ್ ಜೈಲಿನಲ್ಲಿ ಟೆನ್ಷನ್‌ಗೆ ಒಳಗಾಗಿದ್ದಾರೆ. ಜಾಮೀನು ಅರ್ಜಿ ವಿಚಾರವಾಗಿ ಜೈಲು ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ
ಒಂದು ವೇಳೆ ಜಾಮೀನು ಸಿಗದೇ ಇದ್ದರೆ ಮುಂದೆ ಜೈಲು ಬದಲಾವಣೆಯ ಬಗ್ಗೆಯೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಬೆನ್ನು ನೋವಿನ ಸಮಸ್ಯೆ ಇದ್ದರೂ ಒಂದು ಪ್ಲಾಸ್ಟಿಕ್ ಚೇರ್ ಸಿಗುತ್ತಿಲ್ಲ. ದಿಂಬು, ಬೆಡ್ ಕೂಡ ಜೈಲು ಅಧಿಕಾರಿಗಳು ಕೊಡುತ್ತಿಲ್ಲ. ಹೀಗಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಜೈಲು ಬದಲಾವಣೆಗೂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಇಂದು ದರ್ಶನ್ ಜಾಮೀನು ಭವಿಷ್ಯ ಏನಾಗಲಿದೆ ಅಂತ ಕಾದು ನೋಡಬೇಕಿದೆ. ಇದನ್ನೂ ಓದಿ: ಮಹಿಳೆಯ ಭೀಕರ ಕೊಲೆ ಪ್ರಕರಣ – ಕೊನೆಗೂ ಅವಳ ಜೊತೆ ಮಾತಾಡೋಕೆ ಆಗ್ಲಿಲ್ಲ ಕಣ್ಣೀರಿಟ್ಟ ಸಹೋದರಿ