ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನ ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಸ್ಥಳಾಂತರಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ (Court) ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನ ಸ್ಥಳಾಂತರಿಸಿದ್ದಾರೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ
ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶಿಸಿತ್ತು.
ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಲ್ಲರೂ ಒಂದೇ ಕಡೆ ಇರುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಕೆಲವರನ್ನು ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ