ರೇಣುಕಾಸ್ವಾಮಿ ಕೊಲೆ ಪ್ರಕರಣ – ತನಿಖಾ ತಂಡಕ್ಕೆ ಮತ್ತೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ

Public TV
1 Min Read
Inspector Girish Naik

ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ (Inspector Girish Naik) ಸೇರ್ಪಡೆಗೊಂಡಿದ್ದಾರೆ.

ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಹಾಗೂ ಎಸಿಪಿ ಚಂದನ್ ಆರೋಪಿ ದರ್ಶನ್‌ನನ್ನು ಮೈಸೂರಿನಿಂದ (Mysuru) ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಮೈಸೂರಿನಲ್ಲಿ `ದಾಸ’ ತಂಗಿದ್ದ ಹೊಟೇಲ್, ಇತರೆಡೆ ಮಹಜರ್- ಡಿಫೆಂಡರ್ ಕಾರಿಗೆ ಬರುತ್ತಾ ಕಂಟಕ?

DARSHAN RENUKASWAMY

ಇದೇ ವೇಳೆ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದನ್ನೂ ಓದಿ: 25 ವರ್ಷಗಳಿಂದ ಯುವಕರಿಂದ ರಕ್ತದಾನ- ಒಬ್ಬ 51, ಮತ್ತೊಬ್ಬ 43 ಬಾರಿ ಡೊನೇಟ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಶನಿವಾರ ನ್ಯಾಯಾಲಯ ಆದೇಶ ಹೊರಡಿಸಿದೆ.  ಇದನ್ನೂ ಓದಿ: ಉತ್ತರ ಭಾರತಕ್ಕೆ ಹೋಲಿಸಿದ್ರೆ ದಕ್ಷಿಣ ಭಾರತದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೆ

Share This Article