– ದರ್ಶನ್ ಸಹಚರರಿಗೆ ಬಿಗ್ ರಿಲೀಫ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ (Actor Darshan) ಅರೆಸ್ಟ್ ಆಗಿ ನಾಳೆಗೆ (ಜೂ.11) 2 ವರ್ಷ ಪೂರೈಸಲಿದೆ.
ಕೊಲೆ ಕೇಸಲ್ಲಿ 2024 ಜೂನ್ 11ರಂದು ಮೈಸೂರಿನಲ್ಲಿ (Mysuru) ಹೋಟೆಲ್‌ನಲ್ಲಿದ್ದಾಗಲೇ ಅರೆಸ್ಟ್ ಮಾಡಲಾಗಿತ್ತು. 1 ಬಾರಿ ಮಧ್ಯಂತರ ಜಾಮೀನು (Bail) ಪಡೆದು ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂನಲ್ಲಿ ಜಾಮೀನು ರದ್ದಾದ ಹಿನ್ನೆಲೆ ದರ್ಶನ್ ಸೇರಿ 7 ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಜುಲೈ 9ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ

ಇನ್ನು, ದರ್ಶನ್ ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದೆ. ಇದನ್ನೂ ಓದಿ: ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ – 10,000 ಕೋಟಿ ಕಿಕ್‌ಬ್ಯಾಕ್: ಆರ್.ಅಶೋಕ್ ಬಾಂಬ್
ಪ್ರಕರಣದಲ್ಲಿ ಭಾಗಿಯಾಗಿದ್ದ ಎ-3 ಪವನ್, ಎ-4 ರಾಘವೇಂದ್ರ, ಎ-5-ನಂದೀಶ್, ಎ-9 ಧನರಾಜು ಹಾಗೂ ಎ-10 ವಿನಯ್ ಸೇರಿ ಜಾಮೀನಿಗಾಗಿ ಅರ್ಜಿ ಸಲ್ಲಿದ್ದರು. ಈ ಮಧ್ಯೆ, ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಕಿಡಿಗೇಡಿಗಳ ಕಾಟ ಮುಂದುವರೆದಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮಿ ಮೂವಿಗೆ ಹೋದ ವಿಡಿಯೋ ಹಾಕಿ ಕೆಟ್ಟ ಕಾಮೆಂಟ್ ಮಾಡುವ ಮೂಲಕ ನಿಂದನೆ ಮಾಡಿದ್ದಾರೆ.
