ನಾಳೆ ದರ್ಶನ್ ಜಾಮೀನು ಭವಿಷ್ಯ

Public TV
1 Min Read
darshan 1 2

ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan) ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಇದನ್ನೂ ಓದಿ: ಬಹುಕಾಲದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ ಸುರೇಶ್

darshan renukaswamy pavithra gowda

ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.

ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: BBK 11: ಆಟ ಆಡಲು ಅವಕಾಶ ಸಿಗುತ್ತಿಲ್ಲ- ಗೌತಮಿ ನಡೆಗೆ ಗೋಳಾಡಿದ ಚೈತ್ರಾ

ಇದೇ ವೇಳೆ, ಜಾಮೀನು ಅವಧಿ ವಿಸ್ತರಿಸುವಂತೆ ಆರೋಪಿ ದರ್ಶನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Share This Article