ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ (Darshan) ಅವರ ಮಧ್ಯಂತರ ಜಾಮೀನು (Interim Bail Plea ) ಭವಿಷ್ಯ ಇಂದು ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು.
Advertisement
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು. ಇದನ್ನೂ ಓದಿ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ತಾರೆ: ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಶಿವರಾಮ್ ಹೆಬ್ಬಾರ್ ಸಹಮತ
Advertisement
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಾದ-ಪ್ರತಿವಾದವನ್ನು ಆಲಿಸಿ ಇಂದು ಆದೇಶ ಪ್ರಕಟಿಸಲಿದ್ದಾರೆ.
Advertisement
Advertisement
ವಾದ-ಪ್ರತಿವಾದ ಏನಿತ್ತು?
ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.
ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು.
ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್‌ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್‌ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದರು.