ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ (Finger Print) ಹೋಲಿಕೆಯಾಗಿರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಇದನ್ನೂ ಓದಿ: WWEಗೆ ನಿವೃತ್ತಿ ಹೇಳಿದ ಜಾನ್ ಸೀನಾ
Advertisement
Advertisement
ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಸಂಗ್ರಹ ಮಾಡಲಾಗಿತ್ತು. ಇದನ್ನೂ ಓದಿ: ಉತ್ತರ ಭಾರತದಲ್ಲಿ ಕರ್ನಾಟಕ ಶಾಸಕರ ಅಧ್ಯಯನ ಪ್ರವಾಸ
Advertisement
ಎಫ್‌ಎಸ್‌ಎಲ್ ತಜ್ಞರನ್ನ ಬಳಸಿ ಫಿಂಗರ್ ಪ್ರಿಂಟ್ ಸಂಗ್ರಹಿಸಲಾಗಿತ್ತು. ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿತ್ತು.
Advertisement
ತನಿಖೆ ವೇಳೆ ಪೊಲೀಸರು ಪ್ರಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸದೇ ಇದ್ದರೆ ಆರೋಪಿಗಳು ಪ್ರಕರಣದಿಂದ ಖುಲಾಸೆ ಆಗುತ್ತಾರೆ. ಈ ಪ್ರಕರಣದಲ್ಲಿ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದು ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಇದು ಪ್ರಮುಖ ಸಾಕ್ಷ್ಯವಾಗಲಿದೆ.