ನವದೆಹಲಿ: ದರ್ಶನ್ (Darshan) ಪವಿತ್ರ ಗೌಡ (Pavithra Gowda) ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಹೈಕೋರ್ಟ್ ದರ್ಶನ್ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.
Advertisement
ವಿಚಾರಣೆ ವೇಳೆ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತು. ಆದರೆ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿತು.
Advertisement
ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.
Advertisement
Advertisement
ನೋಟಿಸ್ ನಂತರ ಮುಂದೇನು?
ಮುಂದಿನ ವಿಚಾರಣೆಯಲ್ಲಿ ಆರೋಪಿಗಳ ಪರ ವಕೀಲರು ಜಾಮೀನು ನೀಡಿದ್ದನ್ನು ಸಮರ್ಥಿಸಿಕೊಂಡರೆ, ಪೊಲೀಸರ ಪರ ವಕೀಲರು ಜಾಮೀನು ನೀಡಬಾರದು ಎಂದು ವಾದ ಮಂಡಿಸಲಿದ್ದಾರೆ. ಎರಡು ಕಡೆಯ ವಾದವನ್ನು ಆಲಿಸಿದ ಬಳಿಕ ಕೋರ್ಟ್ ತನ್ನ ಆದೇಶವನ್ನು ಪ್ರಕಟಿಸಲಿದೆ.
ಯಾರೆಲ್ಲಾ ಜಾಮೀನು ರದ್ದಿಗೆ ಅರ್ಜಿ ಸಲ್ಲಿಕೆ?
ಪವಿತ್ರಾ ಗೌಡ (ಎ 1)
ದರ್ಶನ್ (ಎ 2)
ಜಗದೀಶ್ ಜಗ್ಗ ಅಲಿಯಾಸ್ ಜಗ್ಗ (ಎ 6)
ಅನುಕುಮಾರ್ ಅಲಿಯಾಸ್ ಅನು (ಎ 7)
ಆರ್ ನಾಗರಾಜು (ಎ 11)
ಎಂ ಲಕ್ಷ್ಮಣ್ (ಎ 12)
ಪ್ರದೋಶ್ ಎಸ್. ರಾವ್ (ಎ 14)
ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್ಗೆ (Supreme Court) ಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.
ಕಡತದಲ್ಲಿ ಏನಿದೆ?
ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ.
ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ.
ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ ಒಟ್ಟು 1492 ಪುಟಗಳ ಕಡತವನ್ನು ಕೋರ್ಟ್ಗೆ ಸಲ್ಲಿಕೆ ಮಾಡಿದೆ.