– ಜಾಮೀನು ಆದೇಶ ಬಳಿಕ ಶ್ಯೂರಿಟಿಗಾಗಿ 9 ದಿನಗಳ ಕಾಲ ಪರದಾಡಿದ್ದ ಕುಟುಂಬಸ್ಥರು
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ (Tumkuru Jail) ಬಿಡುಗಡೆಯಾಗಿದ್ದಾರೆ.
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.ಇದನ್ನೂ ಓದಿ: Israel | ಜಾಫಾದಲ್ಲಿ ಉಗ್ರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ
ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ ಆರೋಪಿಗಳ ಕುಟುಂಬಸ್ಥರಿಗೆ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಸೂಚಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.
ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ದುರ್ಮರಣ