ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಬಗೆದಷ್ಟು ಹತ್ತಾರು ಸಾಕ್ಷಿಗಳು ಹೊರಬರುತ್ತಿವೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ.
ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ಆರೋಪಿಗಳು ಅಲ್ಲೇ ಪಾರ್ಟಿ ಮಾಡಿ ಖುಷ್ಕ ತಿಂದಿದ್ದರು. ಇದರಲ್ಲಿ ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಕೂಡ ಇದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ:ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ
ಸದ್ಯ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಇನ್ನೂ ಹೆಚ್ಚಿನ ಸಾಕ್ಷಿಗಳ ಹುಡುಕಾಟದಲ್ಲಿದ್ದಾರೆ.