ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ (Renukaswamy Murder Case) ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಟ್ರಯಲ್ ಶುರುವಾಗಿದ್ದು, ರೇಣುಕಾಸ್ವಾಮಿ ತಂದೆ-ತಾಯಿಯ ಹೇಳಿಕೆ ದಾಖಲಿಸಲಾಗುತ್ತಿದೆ. ಈ ಹೊತ್ತಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ(Ratnaprabha) ಹೇಳಿಕೆ ನೀಡಿದ್ದಾರೆ. ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕಿತ್ತಾಡಿಕೊಂಡ ರಕ್ಷಿತಾ-ಸ್ಪಂದನಾ; ಮಾಳು ಹೊರಹೋಗೋದಕ್ಕೆ ಕಾರಣ ಯಾರು?
ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ. ಮಗನ ಮೊಬೈಲ್ ಬಗ್ಗೆ ಗೊತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದು ಪೊಲೀಸರ ಮುಂದೆ ಇದೇ ಮೊಬೈಲ್ ಅಂತ ಹೇಳಿದ್ದರು. ಜೊತೆಗೆ ಹತ್ಯೆಯಾದ ದಿನ 2 ಬಾರಿ ರೇಣುಕಾಗೆ ಕರೆ ಮಾಡಿದ್ದರು. ಆದರೆ ಕರೆ ಮಾಡಿಲ್ಲ ಅಂತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು.
ಈ ಎಲ್ಲಾ ಹೇಳಿಕೆಗಳ ಆಧಾರದಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಕೋರಲಾಗಿದೆ. ಒಂದು ವೇಳೆ ರೇಣುಕಾಸ್ವಾಮಿ ತಾಯಿಯನ್ನು ಪ್ರತಿಕೂಲ ಸಾಕ್ಷಿಯನ್ನಾಗಿ ಪರಿಗಣಿಸಿದ್ರೆ ಎಸ್‌ಪಿಪಿ ಪಾಟಿ ಸವಾಲು ಮಾಡಲಿದ್ದಾರೆ. ಖುದ್ದು ಎಸ್‌ಪಿಪಿಯೇ ರತ್ನಪ್ರಭಾ ವಿಚಾರಣೆ ನಡೆಸಲಿದ್ದಾರೆ.

