ಚಿತ್ರದುರ್ಗ: ನಟ ದರ್ಶನ್ (Darshan) & ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಪುತ್ರನ ನಾಮಕರಣವು (Naming Ceremony) ಚಿತ್ರದುರ್ಗದ (Chitradurga) ವಿಆರ್‌ಡಸ್ ಬಡಾವಣೆಯ ನಿವಾಸದಲ್ಲಿ ಶಾಸ್ತ್ರೋಕ್ತವಾಗಿ ನೆರೆವೇರಿತು.
ರೇಣುಕಾಸ್ವಾಮಿ ಹತ್ಯೆ ಬಳಿಕ ಕುಟುಂಬಸ್ಥರು ಕಂಗಾಲಾಗಿದ್ದರು. ಕೊಲೆಯಾದಾಗ ರೇಣುಕಾಸ್ವಾಮಿ ಪತ್ನಿ ಸಹನಾ 5 ತಿಂಗಳ ಗರ್ಭಿಣಿಯಾಗಿದ್ದರು. ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಹಾಗೂ ತಾಯಿ ರತ್ನಪ್ರಭ ಮೊಮ್ಮಗನನ್ನು ಎತ್ತಿಕೊಂಡು ಮುದ್ದಾಡಿದ್ದರು. ಮಗನ ತದ್ರೂಪಿಯಾದ ಮೊಮ್ಮನಿಗೆ ಮುತ್ತಿಟ್ಟು ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ಇದನ್ನೂ ಓದಿ: Grand Championship | ಭಾರತ ತಂಡ ಪ್ರತಿನಿಧಿಸುತ್ತಿರೋ ಎನ್‍ಎಫ್‍ಸಿ ಕ್ಲಬ್
ಜಂಗಮ ಸಂಪ್ರದಾಯದಂತೆ ನಾಮಕರಣ ಶಾಸ್ತ್ರ ನೆರವೇರಿಸಿದರು. ಮನೆ ಮುಂದೆ ತೊಟ್ಟಿಲು ಇಟ್ಟು ಸಿದ್ಧತೆ ನಡೆಸಿದ್ದು, ಕುಟುಂಬದ ಬಂಧುಗಳ ಸಮ್ಮುಖದಲ್ಲಿ ಮಗುವಿನ ನಾಮಕರಣ ಶಾಸ್ತ್ರ ನೆರವೇರಿತು. ಇದನ್ನೂ ಓದಿ: Champions Trophy 2025 | ಭಾರತದ ಗೆಲುವಿಗೆ ಕ್ರೀಡಾಭಿಮಾನಿಗಳಿಂದ `ಬೆಸ್ಟ್ ಆಫ್ ಲಕ್’
ರೇಣುಕಾಸ್ವಾಮಿ ಪುತ್ರನಿಗೆ `ಶಶಿಧರ್ ಸ್ವಾಮಿ’ ಎಂದು ರೇಣುಕಾಸ್ವಾಮಿ ಸಹೋದರಿ ಸುಚೇತ ಮಗುವಿಗೆ ಹೆಸರಿಟ್ಟರು. ಮಗುಗೆ ಜೇನುತುಪ್ಪ ತಿನ್ನಿಸಿ ನಾಮಕರಣ ನೆರವೇರಿಸಿದ ಸುಚೇತ, ಮಗುವಿನ ಕಿವಿಯಲ್ಲಿ ಹೆಸರು ಹೇಳಿದರು. ಇದನ್ನೂ ಓದಿ: Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ
ಮೊಮ್ಮಗ ಶಶಿಧರ್ ಸ್ವಾಮಿ ಕೈ ಬೆರಳಿಗೆ ಉಂಗುರ ಹಾಕಿ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ರತ್ನಪ್ರಭ ಮೊಮ್ಮಗನಿಗೆ ಬೆಳ್ಳಿ ಉಡುದಾರ ಹಾಕಿದರು. ಮಗುವನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರ ನೆರೆವೇರಿಸಿದ್ದು, ಕಾರ್ಯಕ್ರಮದಲ್ಲಿ ಬಂಧು ಮಿತ್ರರು ಭಾಗಿಯಾಗಿದ್ದರು.