ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು

Public TV
2 Min Read
MUSLIM MARRIAGE ACT ASSAM

ಗುವಾಹಟಿ: ಉತ್ತರಾಖಂಡ (Uttarakhand) ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ (Assam) ಸರ್ಕಾರ ಕೂಡ ಇದೇ ರೀತಿಯ ಕಾನೂನನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಅಸ್ಸಾಂ ಕ್ಯಾಬಿನೆಟ್ ಶುಕ್ರವಾರ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಸಭೆಯ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಚಿವ ಜಯಂತ ಮಲ್ಲಬರುವ, ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಮಾಘ ಪೂರ್ಣಿಮೆ; ಪುಣ್ಯಸ್ನಾನಕ್ಕಾಗಿ ಅಯೋಧ್ಯೆಯ ಸರಯೂ ನದಿ ತಟದಲ್ಲಿ ಜನಸಾಗರ

ನಾವು ಏಕರೂಪ ನಾಗರಿಕ ಸಂಹಿತೆಯತ್ತ ಸಾಗುತ್ತಿದ್ದೇವೆ ಎಂದು ಮುಖ್ಯಮಂತ್ರಿ ಇತ್ತೀಚೆಗೆ ಹೇಳಿದ್ದಾರೆ. ಈ ಪ್ರಯಾಣದಲ್ಲಿ ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 (Assam Muslim Marriage and Divorce Registration Act, 1935), ಅಡಿಯಲ್ಲಿ 94 ಮುಸ್ಲಿಂ ರಿಜಿಸ್ಟ್ರಾರ್ ಇನ್ನೂ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಇಂದು ರದ್ದುಗೊಳಿಸಲಾಗಿದೆ. ಇನ್ನುಮುಂದೆ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿ’ಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನೋಂದಣಾಧಿಕಾರಿಗಳು ವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಉತ್ತರ ಕಾಶ್ಮೀರದಲ್ಲಿ ‘ಕನ್ನಡ’ ಬಾವುಟ ಹಾರಿಸಿದ ಧಾರವಾಡದ ಯುವತಿ

ಈ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಮತ್ತು ಪ್ರತಿ ವ್ಯಕ್ತಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮಲ್ಲಬರುವ ಘೋಷಿಸಿದರು. ಇದನ್ನೂ ಓದಿ: ಸಿದ್ದರಾಮುಲ್ಲ ಖಾನ್ ಎನ್ನುತ್ತಾ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಸಂಸದ ಅನಂತ್ ಕುಮಾರ್ ಹೆಗಡೆ

ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಫೆ.23ರಂದು ಅಸ್ಸಾಂ ಕ್ಯಾಬಿನೆಟ್ ಹಳೆಯ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಈ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

Share This Article