ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ (Amit Shah) ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್ ದಾಳಿ
Advertisement
Advertisement