3 ದಿನದೊಳಗೆ ಉತ್ತರಿಸಿ – ಕಾಂತಾರ ತಂಡಕ್ಕೆ ನೋಟಿಸ್

Public TV
2 Min Read
kantara 1

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡ್ತಿರುವ ಕಾಂತಾರ ಚಾಪ್ಟರ್-1 (Kantara Chapter 1) ಸಿನಿಮಾ ತಂಡಕ್ಕೆ ಆಘಾತದ ಮೇಲೆ ಆಘಾತ ಶುರುವಾಗಿವೆ. ಕಾಂತಾರ ಚಾಪ್ಟರ್-1 ಸಿನಿಮಾ ತಂಡ ಕೊನೆ ಹಂತದ ಚಿತ್ರೀಕರಣ (Shooting) ಮಾಡುವ ವೇಳೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗ್ತಿವೆ.

ಸಿನಿಮಾದ ಮೂವರು ಸಹ ಕಲಾವಿದರ ಸಾವು ಮಾಸುವ ಮುನ್ನವೇ ಮತ್ತೊಂದು ಆಘಾತ ಚಿತ್ರತಂಡಕ್ಕೆ ಎದುರಾಗಿದೆ. ಕೂದಲೆಳೆ ಅಂತರದಲ್ಲೇ ಭಾರೀ ಅನಾಹುತವೊಂದು ತಪ್ಪಿದ್ದು, ಮೂವತ್ತು ಜನರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಜೂನ್‌ 14 ರಂದು ತೀರ್ಥಹಳ್ಳಿಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಸಂಭವಿಸಿದೆ ಎಂದು ವರದಿ ಆಗಿತ್ತು. ವರದಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮಾಧ್ಯಮಗಳ ಜೊತೆಯೂ ಸೋಮವಾರ ಮಾತನಾಡಿದ್ದರು.  ಇದನ್ನೂ ಓದಿ: ಕಾಂತಾರ ಶೂಟಿಂಗ್‌ – ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Reply within 3 days notice to Kantara Chapter 1 team hosanagara tahsildar

ಮಾಣಿ ಜಲಾಶಯದಲ್ಲಿ (Mani Dam) ಶೂಟಿಂಗ್ ಮಾಡಲು ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲೂಕು ಆಡಳಿತಕ್ಕಾಗಲಿ, ಜಿಲ್ಲಾ ಆಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನ ಚಿತ್ರತಂಡ ನೀಡಿರುವುದಿಲ್ಲ. ಶೂಟಿಂಗ್ ವೇಳೆ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿ 30 ಜನ ಈಜಿ ದಡ ಸೇರಿರುವ ಬಗ್ಗೆ ಸ್ಪಷ್ಟನೆ ಮಾತ್ರ ನೀಡಿದ್ದೀರಿ. ಈ ಬಗ್ಗೆ ಮಾನ್ಯ ಜಿಲ್ಲಾ ಅಧಿಕಾರಿಯವರು ಈ ಬಗ್ಗೆ ವರದಿ ಕೇಳಿದ್ದು, ರಾಜಸ್ವ ನಿರೀಕ್ಷಕರು, ನಗರ ಹೋಬಳಿರವರು ನಿಮ್ಮ ಸಂಸ್ಥೆಯ ಮ್ಯಾನೇಜರ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅನುಮತಿ ಪತ್ರಗಳನ್ನ ಹಾಜರುಪಡಿಸುವಂತೆ ಹೇಳಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

ಮಾಣಿ ಜಲಾಶಯದಲ್ಲಿ ನಡೆದ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ಹೊಸನಗರ ತಹಶೀಲ್ದಾರ್ ಕಚೇರಿಯಿಂದ ಪತ್ರ ಬರೆದಿದ್ದು, ಪತ್ರ ತಲುಪಿದ ಮೂರುದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇಲ್ಲವಾದಲ್ಲಿ ನಂತರ ಶೂಟಿಂಗ್‌ಗೆ ನೀಡಿರುವ ಅನುಮತಿಯನ್ನ ರದ್ದುಗೊಳಿಸಿ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ತಹಶೀಲ್ದಾರ್ ಕಛೇರಿಯಿಂದ ಕಾಂತಾರ ಚಿತ್ರತಂಡಕ್ಕೆ ಖಡಕ್ ಪತ್ರವೊಂದು ರವಾನೆಯಾಗಿದೆ. ಈಗ ತಹಶೀಲ್ದಾರ್ ನೋಟಿಸ್‌ಗೆ ಉತ್ತರ ಕೊಡುವ ಅನಿವಾರ್ಯತೆ ಚಿತ್ರತಂಡಕ್ಕೆ ಎದುರಾಗಿದೆ. ಜೊತೆಗೆ ಚಿತ್ರೀಕರಣದ ಅನುಮತಿ ಪತ್ರಗಳನ್ನು ಸಲ್ಲಿಸಬೇಕಾಗಿದೆ.

Share This Article