ನವದೆಹಲಿ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಇತರ ಗಣ್ಯರ ಜೀವಕ್ಕೆ ಅಪಾಯವಿರುವದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಗುಪ್ತಚರ ಇಲಾಖೆ ನೀಡಿರುವ 9 ಪುಟಗಳ ಮಾಹಿತಿಯಲ್ಲಿ, ಪ್ರಧಾನಿ ಮೋದಿ ಹಾಗೂ ಇತರ ಗಣ್ಯರ ಜೀವಕ್ಕೆ ಅಪಾಯ ಇದೆ. ಈ ಬಾರಿಯ 75ನೇ ಗಣರಾಜ್ಯೋತ್ಸವಕ್ಕೆ 5 ಮಧ್ಯ ಏಷ್ಯಾ ದೇಶಗಳಾದ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ನ ಮುಖ್ಯಸ್ಥರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿಗೆ ಡಿವೋರ್ಸ್ ನೀಡಿದ ಧನುಷ್
Advertisement
Advertisement
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಮೂಲದ ಉಗ್ರಗಾಮಿಗಳಿಂದ ಈ ಬೆದರಿಕೆಯಿದೆ. ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ, ವಿಶೇಷ ಗಣ್ಯರು, ಹಾಗೂ ಸಾರ್ವಜನಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ನೀಡಿರುವ 9 ಪುಟಗಳ ಮಾಹಿತಿ ನೀಡಿದೆ. ಮಾಹಿತಿಯ ಬೆನ್ನಲ್ಲೇ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ
Advertisement
Advertisement
ಅತ್ಯಾಧುನಿಕ ಡ್ರೋನ್ ಬಳಸಿ ದಾಳಿ ನಡೆಸುವ ಸಾಧ್ಯತೆಯಿದ್ದು, ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್, ಹರ್ಕತ್-ಉಲ್-ಮುಜಾಹಿದ್ದೀನ್ ಹಾಗೂ ಹಿಜ್ಬ್-ಉಲ್-ಮುಜಾಹಿದ್ದೀನ್, ಭಯೋತ್ಪಾದಕ ಸಂಘಟನೆಗಳು ದಾಳಿ ನಡೆಸುವ ಸಂಚು ರೂಪಿಸಿದೆ ಎಂದಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಕೂಡಾ ಪಂಜಾಬ್ ಮತ್ತು ಇತರ ರಾಜ್ಯಗಳ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದೆ ಎಂದು ತಿಳಿಸಿದೆ.