ರಾಯಚೂರು: ಗಣರಾಜ್ಯೋತ್ಸವ (Republic Day) ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗ್ರೂಪ್ ಡ್ಯಾನ್ ಮಾಡುವಾಗ ಕುಸಿದು ಬಿದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಸಾವಿಗೀಡಾಗಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ನಡೆದಿದೆ.
42 ವರ್ಷ ವಯಸ್ಸಿನ ಮಹಾಂತೇಶ್ ಪೂಜಾರಿ ಮೃತ ವ್ಯಕ್ತಿ. ಜಿಲ್ಲೆಯ ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಸಿಂಧನೂರು ತಾಲೂಕು ಆಸ್ಪತ್ರೆ ಸಿಬ್ಬಂದಿಯಿಂದ ನೃತ್ಯ ಪ್ರದರ್ಶನವಿತ್ತು. ಇದನ್ನೂ ಓದಿ: 74th Republic Day: ದೆಹಲಿಯ ಕರ್ತವ್ಯ ಪಥ್ನಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್
Advertisement
ಗ್ರೂಪ್ ಡ್ಯಾನ್ಸ್ ಮಾಡುವ ವೇಳೆ ದಿದ್ದಿಗಿ ಗ್ರಾಮದ ನಿವಾಸಿ ಮಹಾಂತೇಶ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
Advertisement
Advertisement
ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಎಆರ್ಟಿ ಅಧಿಕಾರಿಯಾಗಿದ್ದ ಮಹಾಂತೇಶ್, ಮ್ಯಾಸಿವ್ ಹಾರ್ಟ್ ಅಟ್ಯಾಕ್ ಹಿನ್ನೆಲೆ ಮೃತಪಟ್ಟಿದ್ದಾರೆ. ಮಹಾಂತೇಶ್ ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k