ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

ನೆಲಮಂಗಲ: ಗಣರಾಜ್ಯೋತ್ಸವ (Republic Day) ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಸುಪರ್ ಸಿಂಗಂ ಎಂದೇ ಜನರಿಂದ ಪ್ರಶಂಸೆ ಪಡೆದಿರುವ ಇನ್ಸ್‌ಪೆಕ್ಟರ್ ಮಂಜುನಾಥ್ (CPI Manjunath) ಆಯ್ಕೆಯಾಗಿದ್ದಾರೆ.
ಸೇವಾ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಬೆನ್ನತ್ತಿ ಸಮಾಜ ಘಾತುಕರಿಗೆ ಬಿಸಿ ಮುಟ್ಟಿಸಿ ಜನಸಾಮಾನ್ಯರ ಅಚ್ಚುಮೆಚ್ಚಿನ ಪೊಲೀಸ್ ಅಧಿಕಾರಿಯಾಗಿ ಮಂಜುನಾಥ್ ಗುರುತಿಸಿಕೊಂಡಿದ್ದಾರೆ. ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಭಾಗದ ಜನರು ಇವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ
ಜನರ ನಾಡಿ ಮಿಡಿತ, ಕುಂದುಕೊರತೆಗಳು, ಜನಸಾಮಾನ್ಯರ ಪ್ರೀತಿ ವಿಶ್ವಾಸ, ಸ್ನೇಹ ಜೀವಿಯಂತೆ ಕೆಲಸ ಮಾಡಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಪುರಸ್ಕರಿಸಲಾಗುತ್ತದೆ.
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k