-ಗಣರಾಜ್ಯೋತ್ಸವಕ್ಕೆ ಗೈರಾದ ಜನತೆ
ಐಜ್ವಾಲ್: ದೇಶದೆಲ್ಲೆಡೆ ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ದೆಹಲಿಯ ರಾಜಪಥನಲ್ಲಿಯಂತೂ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮಿಜೋರಾಂ ರಾಜ್ಯಪಾಲರಾದ ಕುಮ್ಮನಾಮ ರಾಜಶೇಖರನ್ ಖಾಲಿ ಮೈದಾನದಲ್ಲಿ ಭಾಷಣ ಮಾಡಿದ್ದಾರೆ.
ಐಜ್ವಾಲ ನಗರದ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೇವಲ ಬೆರಳಣಿಕೆಯಷ್ಟೆ ಜನರು ಮಾತ್ರ ಹಾಜರಾಗಿದ್ದರು. ಸಂಪುಟದ ಕೆಲ ಮಂತ್ರಿಗಳು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಧ್ವಜಾರೋಹಣದ ಬಳಿಕ ಖಾಲಿ ಮೈದಾನದ ಮುಂದೆಯೇ ರಾಜ್ಯಪಾಲರು ಭಾಷಣ ಮಾಡಿದ್ರು.
Advertisement
Advertisement
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸಿಟಿಜನ್ ಶಿಪ್ ಬಿಲ್ ವಿರೋಧಿಸಿ ಎನ್‍ಜಿಓ ಕೋಆರ್ಡಿನೇಷನ್ ಕಮೀಟಿ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಆಡಳಿತ ವರ್ಗ ಹೊರತುಪಡಿಸಿ ಸಾಮಾನ್ಯ ನಾಗರಿಕರು ಕಾರ್ಯಕ್ರಮದಿಂದ ದೂರ ಉಳಿದುಕೊಂಡಿದ್ರೆ, ಕೆಲವರು ಮೈದಾನದ ಮುಂಭಾಗದಲ್ಲಿ ಬಿಲ್ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಸಾಮಾಜಿಕ ಮತ್ತು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಿದ್ದವು.
Advertisement
ರಾಜ್ಯಪಾಲರು ತಮ್ಮ ಭಾಷಣದಲ್ಲಿ, ರಾಜ್ಯ ಸರ್ಕಾರ ಗಡಿ ಮತ್ತು ಜನತೆ ಸುರಕ್ಷೆಗಾಗಿ ಬಹು ದೊಡ್ಡ ಹೆಜ್ಜೆಯನ್ನಿಡಲು ನಿರ್ಧರಿಸಿದೆ. ಸರ್ಕಾರ ಅಭಿವೃದ್ಧಿ ಮತ್ತು ಜನಪರವಾಗಿ ಕೆಲಸ ಮಾಡುತ್ತಿದೆ. ರಾಜ್ಯದ ಜನತೆಯ ಗುರುತಿಗಾಗಿ ಹಾಗು ಸಾಂಸ್ಕೃತಿಕ ಮೌಲ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಗ್ರಾಮ ಗ್ರಾಮಗಳಿಗೆ ತೆರಳಿ ನಾಗರೀಕತ್ವದ ನೋಂದಣಿಯನ್ನು ಮಾಡಿಕೊಳ್ಳುತ್ತಿದೆ. ಸರ್ಕಾರ ರಾಜ್ಯದ ಜನತೆಯಲ್ಲಿ ಸಹೋದರತ್ವ ಭಾವನೆಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv