-ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ
-ಸಿಎಂ ಸಿದ್ದರಾಮಯ್ಯ ಮನವಿಯಿಂದಲೂ ಆಗಿಲ್ಲ ಪ್ರಯೋಜನ
ಬೆಂಗಳೂರು: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯಲ್ಲಿ ಪಥ ಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಲಾಗಿದೆ.
Advertisement
Advertisement
ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ ನೀಡಲಾಗಿದೆ. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕರ್ನಾಟಕವು ಸ್ತಬ್ಧಚಿತ್ರವನ್ನು ತಯಾರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ. ಇದನ್ನೂ ಓದಿ: ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ
Advertisement
Advertisement
ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ