Connect with us

Corona

ಗಣರಾಜ್ಯೋತ್ಸವ ಸಂಭ್ರಮಾಚರಣೆಗೂ ಬ್ರೇಕ್ ಹಾಕಿದ ಕೊರೊನಾ..!

Published

on

ನವದೆಹಲಿ: ಪ್ರತಿ ವರ್ಷ ದೆಹಲಿಯ ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮಕ್ಕೆ ಈ ಬಾರಿ ಕೊರೊನಾ ಅಡ್ಡಿಯಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

ಪ್ರತಿ ಬಾರಿ ವಿಜಯ್ ಚೌಕದಿಂದ ಆರಂಭವಾಗಿ ಕೆಂಪುಕೋಟೆಯವರೆಗೂ ನಡೆಯುತ್ತಿದ್ದ ಪರೇಡ್ ಈ ಬಾರಿ ನ್ಯಾಷನಲ್ ಸ್ಟೇಡಿಯಂವರೆಗೂ ಮಾತ್ರ ತಲುಪಲಿದೆ. ಪ್ರತಿ ವರ್ಷ 8.2 ಕಿಮೀವರೆಗೂ ಸಾಗುತ್ತಿದ್ದ ಪರೇಡ್ ಈ ಬಾರಿ 3.3 ಕಿಮೀವರೆಗೂ ಸಾಗಲಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜಪಥದಲ್ಲಿ 1,15,000 ಲಕ್ಷ ಜನರಿಗೆ ಪರೇಡ್ ವೀಕ್ಷಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತಿತ್ತು. ಆದರೆ ಕೊರೊನಾ ನಿಯಂತ್ರಿಸುವ ಸಲುವಾಗಿ ಕೇವಲ 25,000 ಜನರಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದ್ದು, ಪರೇಡ್ ವೀಕ್ಷಣೆಗೆ ಅನುಮತಿ ನೀಡಲಾಗಿದೆ. 15 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ದೈಹಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ಇತಿಹಾಸದಲ್ಲಿಯೇ ಪರೇಡ್ ತಂಡದಲ್ಲಿದ್ದ 144 ಜನರನ್ನು ಇದೀಗ 96 ಜನಕ್ಕೆ ಕಡಿತಗೊಳಿಸಲಾಗಿದೆ. ಜೊತೆಗೆ ಸಾಂಸ್ಕøತಿಕ ಕಾರ್ಯಕ್ರಗಳನ್ನು ಕೂಡ ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಪರೇಡ್ ನಡೆಸುವ ಎಲ್ಲಾ ತಂಡಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ.

ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಲಿದ್ದಾರೆ. ಈಗಾಗಲೆ ಬ್ರಿಟನ್‍ನಲ್ಲಿ ಕೊರೊನಾ ವೈರಸ್ ಹೆಚ್ಚಿದರೂ ಕೂಡ ಬ್ರಿಟನ್ ಪ್ರಧಾನಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಖಚಿತ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಕಳೆದ ವಾರ ತಿಳಿಸಿದೆ.

Click to comment

Leave a Reply

Your email address will not be published. Required fields are marked *

www.publictv.in