ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.
ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Advertisement
Advertisement
ಹುತಾತ್ಮ ಯೋಧರಿಗೆ ಮೋದಿ ಗೌರವ
76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
Advertisement
ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. ಅಲ್ಲದೇ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.