ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್ ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದರು. ಸಮಾಧಿ ಸಲ್ಲಬೇಕಾದ ಗೌರವ ನೀಡಿ ಎಂದು ಬರೆದುಕೊಂಡಿದ್ದರು. ನಟನ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದರ್ಶನ್ ಅವರ ಪ್ರಾಣಿ ಪ್ರೀತಿಗೆ ಅಭಿಮಾನಿಗಳು ಮತ್ತು ಪ್ರಾಣಿ ಪ್ರಿಯರು ಜೈ ಹೋ ಎಂದಿದ್ದಾರೆ.
ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ (Darshan) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವರು ಪ್ರಾಣಿಗಳ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ.
ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ (Elephant) ಅರ್ಜುನ್ (Arjun) ಗೆ ಅರ್ಪಿಸಿದ್ದಾರೆ.
ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೃತ್ಯ ಮತ್ತು ದೈವ ಜೀವ ಅರ್ಜುನ ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆಯಲಾಗಿದೆ. ಈ ಮೂಲಕ ಅರ್ಜುನ್ ಗೆ ಗೌರವ ನೀಡಲಾಗಿದೆ.