– ಅಬಕಾರಿ ಸಚಿವರಿಗೆ ಮನವಿ ಸಲ್ಲಿಸಿದ ಹೋಟೆಲ್ ಅಸೋಸಿಯೇಷನ್
ಬೆಂಗಳೂರು: ತಡರಾತ್ರಿ 2 ಗಂಟೆಯವರೆಗೆ ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳ (Bar And Restaurant) ಓಪನ್‌ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು (Hotel Association) ಅಬಕಾರಿ ಸಚಿವರಿಗೆ ಮನವಿ ಮಾಡಿದೆ.
Advertisement
ಪಬ್, ಬಾರ್ & ರೆಸ್ಟೋರೆಂಟ್ ಲೈಸೆನ್ಸ್ ನವೀಕರಣಕ್ಕೆ ಆನ್‌ಲೈನ್ ಸಮಸ್ಯೆಯಾಗಿದೆ. ಹೆಚ್ಚುವರಿ ಶುಲ್ಕ ಕಟ್ಟಿದರೂ ಲೈಸೆನ್ಸ್ ನೀಡುತ್ತಿಲ್ಲ ಎಂದು ಹೋಟೆಲ್ ಅಸೋಸಿಯೇಷನ್ ಆರೋಪಿಸಿದೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ, ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆ: ರಾಜು ಕಾಗೆ
Advertisement
Advertisement
ಅಲ್ಲದೇ ಅಬಕಾರಿ ಇಲಾಖೆಯಲ್ಲಿ (Excise Department) ಕಾನೂನು ತೊಡಕಿನ ಆರೋಪವನ್ನೂ ಹೋಟೆಲ್ ಅಸೋಸಿಯೇಷನ್ ಹೊರಿಸಿದೆ. ಕಾನೂನು ಸಬಲೀಕರಣ ಮಾಡದೆ ನಮಗೆ ನೋಟಿಸ್ ಕೊಟ್ಟು ಸಮಸ್ಯೆ ಮಾಡುತ್ತಿದ್ದಾರೆ. ನಗರದಲ್ಲಿ ತಡರಾತ್ರಿ 2 ಗಂಟೆವರೆಗೆ ಹೋಟೆಲ್, ಬಾರ್ & ರೆಸ್ಟೋರೆಂಟ್ ಓಪನ್‌ಗೆ ಅನುಮತಿ ನೀಡುವಂತೆ ಬೃಹತ್ ಬೆಂಗಳೂರು ಹೋಟೆಲ್ ಸಂಘಟನೆಗಳು ಅಬಕಾರಿ ಸಚಿವರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಯತ್ನಾಳ್ ಆಗ್ರಹ
Advertisement