ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಶಿವಮೊಗ್ಗ ಆಯ್ಕೆ ಮಾಡಲು ಹೆಚ್‌ಡಿಕೆಗೆ ಮನವಿ

Public TV
2 Min Read
shivamogga hd kumaraswamy

ಶಿವಮೊಗ್ಗ: ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಶಿವಮೊಗ್ಗ ಮಹಾನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಶಿವಮೊಗ್ಗ (Shivamogga) ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರಿಗೆ ಮನವಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದೆ. ಶಿವಮೊಗ್ಗ ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು. ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ ಕೊಲೆ – ಸಂಬಂಧಿಕರ ಜೊತೆ ಸೇರಿ ಮೃತದೇಹ ಸುಟ್ಟುಹಾಕಿದ ಪತಿ

ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕರ್ನಾಟಕ ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ

ಶಿವಮೊಗ್ಗ ಜಿಲ್ಲೆಯು ಪ್ರಸ್ತುತ ವಾಯು ಸಾರಿಗೆ, ರೈಲ್ವೆ ಸಾರಿಗೆ ಹಾಗೂ ರಸ್ತೆ ಸಾರಿಗೆಯಲ್ಲಿ ಉತ್ತಮ ಸೌಲಭ್ಯ ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕವಾದ ವಾತಾವರಣ ಶಿವಮೊಗ್ಗದಲ್ಲಿದೆ. ಇಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಿದಲ್ಲಿ ಉದ್ಯೋಗ ಅವಕಾಶ ಹೆಚ್ಚು ಲಭ್ಯವಾಗುತ್ತದೆ ಎಂದು ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ.ಎಲಿ, ವಿಶ್ವೇಶ್ವರಯ್ಯ, ರಾಮಾಜೋಯೀಸ್ ಹಾಗೂ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಟ್ರೈನಿ ವೈದ್ಯೆ `ಹತ್ಯಾ’ಚಾರ ಕೇಸ್ – ಟಿಎಂಸಿ ವಿರುದ್ಧ ಸಿಡಿದೆದ್ದು ರಾಜೀನಾಮೆ ನೀಡಿದ ಸಂಸದ

Share This Article