ರಾಯಚೂರು: ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಅಂತ ಆಗ್ರಹಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹೋರಾಟಗಾರರು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
Advertisement
ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವಾಸ ದ್ರೋಹ ಮಾಡಿದ ವರ್ಷಾಚರಣೆ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವಲ್ಲಿ ದ್ವಂದ್ವ ನಿಲುವು ಪ್ರದರ್ಶಿಸುತ್ತಿವೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ
Advertisement
Advertisement
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು ಮತ್ತು ಕೋಮು ಭಾವನೆ ಕೆರಳಿಸುತ್ತಿರುವ ಸಂಘಟನೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈ ಗೊಳ್ಳಬೇಕೆಂದು ಮುಖ್ಯಮಂತ್ರಿಗೆ ಒತ್ತಾಯಿಸಿ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಕುಂಭಾಭಿಷೇಕಕ್ಕೆ ಮಸೀದಿಯಿಂದ ಫ್ಲೆಕ್ಸ್- ಸಮಾನತೆ ಸಾರಿದ ಕಾಫಿನಾಡ ಮುಸ್ಲಿಮರು