ತುಮಕೂರು: ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್‍ಎಎಲ್ (HAL) ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹತೆ ಆಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಜಮೀನು ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ (Job) ನೀಡಬೇಕು. ಕೊನೆಗೆ ಕಸ ಗುಡಿಸುವ ಕೆಲಸವನ್ನಾದರೂ ಕೊಡುವಂತೆ ಹೇಳಿದ್ದೇವೆ ಎಂದರು.
ಜಿಲ್ಲೆಯಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರದ ಹಂತದಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾಪ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾರ್ಗೊ ವಿಮಾನ ನಿಲ್ದಾಣ ನಿರ್ಮಾಣವಾಗಬಹುದು ಎಂದು ಸುಳಿವು ನೀಡಿದರು. ಇದನ್ನೂ ಓದಿ: ಅದೇನ್ ಬಿಚ್ಚಿಡ್ತಾರೋ ಬಿಚ್ಚಿಡಲಿ- ಹೆಚ್‍ಡಿಕೆಗೆ ಡಿಕೆಶಿ ಸವಾಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ನಡೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರು ಬೇಡಿಕೆ ಸಲ್ಲಿಸಿದ್ದು, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡುವಂತೆ ಕೇಳಿಕೊಂಡಿದ್ದೇವೆ. ತುಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಗಮನಕ್ಕೆ ಬಂದರೆ ತನಿಖೆ ನಡೆಸಲಾಗುವುದು. ಬರಪೀಡಿತ ತಾಲೂಕು ಘೋಷಣೆ ಬಗ್ಗೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಳ್ಳಬೇಕಿದೆ ಎಂದು ವಿವರಿಸಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]