ಬೆಂಗಳೂರು: ಚುನಾವಣೆಯ ಮಧ್ಯೆ ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ವಿದ್ಯುತ್ ದರ ಏರಿಕೆಗೆ ಕೆಇಆರ್ ಸಿ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ಕ್ಕೆ ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿಕೊಂಡಿದೆ.
ಪ್ರತಿ ಯೂನಿಟ್ ಗೆ ಒಂದು ರೂ. ಏರಿಕೆ ಮಾಡುವಂತೆ ಐದು ವಿದ್ಯುತ್ ಕಂಪನಿಗಳು ಈಗಾಗಲೇ ಮನವಿಮಾಡಿಕೊಂಡಿದ್ದು, ಅದರಲ್ಲೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ 1.46 ಪೈಸೆಯ ಅತೀ ಹೆಚ್ಚು ದರ ಏರಿಕೆಗೆ ಮನವಿ ಮಾಡಿದೆ. ಹೀಗಾಗಿ ಇದೀಗ ರಾಜ್ಯ ಸರ್ಕಾರ ದರ ಏರಿಕೆ ಧರ್ಮಸಂಕಟಕ್ಕೆ ಸಿಲುಕಿದೆ.
Advertisement
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಸಾರ್ವಜನಿಕ ಅಹವಾಲು ಸ್ವೀಕಾರವಾದ ಬಳಿಕ ದರ ಏರಿಕೆಯಾಗಲಿದೆ. ಆದ್ರೆ ಎಲೆಕ್ಷನ್ ಹಿನ್ನಲೆಯಲ್ಲಿ ದರ ಏರಿಕೆ ಕೈ ಸರ್ಕಾರಕ್ಕೆ ಸೈಡ್ ಎಫೆಕ್ಟ್ ಹೊಡೆಯಲಿದೆ ಅನ್ನೋ ಭಯವೂ ರಾಜ್ಯ ಸರ್ಕಾರಕ್ಕೆ ಎದುರಾಗಿದೆ.
Advertisement
ಇದನ್ನೂ ಓದಿ: ಕೇಂದ್ರ ಸರ್ಕಾರ 2 ರೂ. 50 ಪೈಸೆಗೆ ವಿದ್ಯುತ್ ನೀಡಿದ್ರೆ ಬಿಎಸ್‍ವೈ ಹಿಂದೆ ಅಲೆಯುವೆ: ಡಿಕೆಶಿ
Advertisement
ದರ ಏರಿಕೆ ಅನಿವಾರ್ಯ: ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಫೆ. 20ರಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದರು. ಈ ಬಗ್ಗೆ 5 ವಿದ್ಯುತ್ ಸರಬರಾಜು ಕಂಪೆನಿಗಳಿಂದ ಪ್ರಸ್ತಾವನೆ ಬಂದಿದ್ದು, ಪ್ರತಿ ಯೂನಿಟ್‍ಗೆ 1 ರೂಪಾಯಿ 48 ಪೈಸೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ ಎಂದು ತಿಳಿಸಿದ್ದರು. ಕಳೆದ ವರ್ಷ ಮಾರ್ಚ್‍ನಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು.
Advertisement
ಕಳೆದ ಬಾರಿ ಎಷ್ಟು ಹೆಚ್ಚಳ ಮಾಡಲಾಗಿತ್ತು?: ನಗರದ ಗೃಹಬಳಕೆ ಗ್ರಾಹಕರಿಗೆ ಮೊದಲ 30 ಯೂನಿಟ್‍ಗೆ 30 ಪೈಸೆ, 31 ರಿಂದ 100 ಯೂನಿಟ್‍ಗೆ 40 ಪೈಸೆ ಹೆಚ್ಚಿಸಲಾಗಿತ್ತು. 100 ಯೂನಿಟ್‍ಗೆ ಮೇಲ್ಪಟ್ಟ ಬಳಕೆಗೆ ಪ್ರತಿ ಹಂತದಲ್ಲಿ ತಲಾ 50 ಪೈಸೆ ಏರಿಸಲಾಗಿತ್ತು. ಗ್ರಾಮೀಣ ಗೃಹಬಳಕೆದಾರರಿಗೂ ಇಷ್ಟೇ ದರ ಹೆಚ್ಚಳವಾಗಿತ್ತು. ಎಲ್ಲ ಗ್ರಾಹಕರನ್ನು ಪರಿಗಣಿಸಿ ಲೆಕ್ಕ ಹಾಕಿದರೆ ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 48 ಪೈಸೆಯಷ್ಟು ಏರಿಕೆ ಮಾಡಿದಂತಾಗಿತ್ತು. ಇದು ಕಳೆದ ಒಂದು ದಶಕದಲ್ಲಾದ ಅತ್ಯಧಿಕ ಪ್ರಮಾಣದ ದರ ಏರಿಕೆಯಾಗಿತ್ತು. ವಿದ್ಯುತ್ ಸರಬರಾಜು ಕಂಪೆನಿಗಳು (ಎಸ್ಕಾಂ) ಪ್ರತಿ ಯೂನಿಟ್‍ಗೆ 1.02 ರೂ. ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು.