ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ದೇವಘಾಟ ಸಮೀಪ ಇರುವ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕುರಿಗಾರರನ್ನು ಹಾಗೂ 120 ಕುರಿಗಳನ್ನು ಶುಕ್ರವಾರ ರಕ್ಷಣೆ ಮಾಡಲಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಕುರಿಗಾರರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಕಳೆದ 2-3 ದಿನಗಳಿಂದ ಕುರಿಗಾರರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎನ್ನುವ ಮಾಹಿತಿ ಮೇರೆ ತಾಲೂಕು ಆಡಳಿತ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದೊಂದಿಗೆ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇದನ್ನೂ ಓದಿ: ಶರವೇಗದ ಓಟಕ್ಕೆ ಹೆಸರಾಗಿದ್ದ ಹೋರಿ ತಮಿಳುನಾಡಿಗೆ ಬರೋಬ್ಬರಿ 19 ಲಕ್ಷಕ್ಕೆ ಸೇಲ್
Advertisement
Advertisement
ಎನ್‌ಡಿಆರ್‌ಎಫ್ ತಂಡದ 16 ಜನರ ಹಾಗೂ ಅಗ್ನಿ ಶಾಮಕ ದಳದ 12 ಜನರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕುರಿಗಾರರು ಹಾಗೂ 120 ಕುರಿಗಳನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದೆ. ಇದನ್ನೂ ಓದಿ: ವಿವಿ ಪುರಂನ ತಿಂಡಿಗಳನ್ನು ಸವಿದು ಬಾಯ್ತುಂಬ ಹೊಗಳಿದ ಕೇಂದ್ರ ಸಚಿವ ಜೈಶಂಕರ್