– ಪಿಂಡ ಪ್ರಧಾನಕ್ಕೆ ಬಂದಿದ್ದ ಓರ್ವನ ರಕ್ಷಣೆ
ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಪ್ರವಾಸಿಗರು ಸೇರಿ ಒಟ್ಟು 8 ಜನರನ್ನು ರಕ್ಷಿಸಿದ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಗೋಕರ್ಣ (Gokarna) ಮುಖ್ಯ ಕಡಲ ತೀರದಲ್ಲಿ ನಡೆದಿದೆ.
Advertisement
Advertisement
ಲೈಫ್ ಗಾರ್ಡ್ ಸಿಬ್ಬಂದಿ ಪ್ರತ್ಯೇಕ ಘಟನೆಯಲ್ಲಿ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 7 ಮಂದಿ ಹಾಗೂ ಪಿಂಡ ಪ್ರಧಾನಕ್ಕೆಂದು ಬಂದಿದ್ದ ಓರ್ವನನ್ನು ರಕ್ಷಿಸಿದ್ದಾರೆ. ಪ್ರವಾಸಿಗರನ್ನು ಪರಶುರಾಮ (44), ರುಕ್ಮಿಣಿ (38), ಧೀರಜ್ (14), ಅಕ್ಷರ (14), ಖುಷಿ (13), ದೀಪಿಕಾ ಹಾಗೂ ನಂದ ಕಿಶೋರ (10) ಎಂದು ಗುರುತಿಸಲಾಗಿದೆ. ಕುಟುಂಬಸ್ಥರು ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಇದನ್ನೂ ಓದಿ: ಚೈತ್ರಾ ಕೋಟಿ ಡೀಲ್ ಪ್ರಕರಣ – ವಜ್ರದೇಹಿ ಮಠದ ಸ್ವಾಮೀಜಿಗೆ ಸಿಸಿಬಿ ನೋಟಿಸ್
Advertisement
Advertisement
ಪಿಂಡ ಪ್ರಧಾನಕ್ಕೆಂದು ಬಂದಿದ್ದ ಹುಬ್ಬಳ್ಳಿಯ ಎಲ್.ವಿ.ಪಾಟೀಲ್ (30) ಎಂಬವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಲೈಫ್‌ಗಾರ್ಡ್ ಸಿಬ್ಬಂದಿ ಶಿವಪ್ರಸಾದ್ ಅಂಬಿಗ ಮತ್ತು ಲೋಕೇಶ್ ಹರಿಕಾಂತ ಎಂಬವರು ರಕ್ಷಣೆ ಮಾಡಿದ್ದು, ಘಟನೆಯ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್
Web Stories