ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ (Murdeshwar) ಈಜಲು ಹೋಗಿ ಸಮುದ್ರ ಪಾಲಾಗುತಿದ್ದ ಬೆಂಗಳೂರು (Bengaluru) ಮೂಲದ ಯುವಕನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದ ಪುನಿತ್ (20) ಎಂಬ ಯುವಕನನ್ನು ರಕ್ಷಿಸಲಾಗಿದೆ. ಬೆಂಗಳೂರಿನಿಂದ ನಾಲ್ಕು ಜನರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಆಗಮಿಸಿದ್ದರು. ಪುನಿತ್ ಎಂಬಾತ ಸಮುದ್ರದಲ್ಲಿ ಅಲೆಯ ಹೊಡೆತಕ್ಕೆ ಸಮುದ್ರ ಪಾಲಾಗುತ್ತಿದ್ದನ್ನು ಕಂಡ ತಕ್ಷಣ ರಕ್ಷಣಾ ಸಿಬ್ಬಂದಿ, ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ
ಮುರುಡೇಶ್ವರದ ಕಡಲ ತೀರದಲ್ಲಿ ಪ್ರವಾಸಿಗರಿಗೆ ಕಳೆದ ಹತ್ತು ದಿನದಿಂದ ನಿರ್ಬಂಧ ವಿಧಿಸಲಾಗಿತ್ತು. ಆದರೂ ದೇವಸ್ಥಾನದ ಮತ್ತೊಂದು ಭಾಗದಲ್ಲಿ ಪ್ರವಾಸಿಗರು ನೀರಿಗಿಳಿಯುತಿದ್ದರು. ಇದನ್ನೂ ಓದಿ: ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ – ಆರ್.ಅಶೋಕ್