ಮಳೆಗೆ ಅಪಾಯದಲ್ಲಿ ಸಿಲುಕಿರೋ ಮಂದಿಯ ರಕ್ಷಣೆಗಿಳಿದ ಸೇನಾಪಡೆ

Public TV
1 Min Read
RAIN MADIKERI

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಅಪಾಯದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಸೇನಾ ಪಡೆಯ ಎರಡು ತುಕಡಿಯ ಸಹಾಯದಿಂದ ಇಂದು ನಡೆಯಲಿದೆ.

ಈಗಾಗಲೇ ಮಳೆಯಲ್ಲಿ ನಿರಾಶ್ರಿತರಾದವರಿಗೆ 10 ಗಂಜಿಕೇಂದ್ರಗಳನ್ನು ತೆರೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿ ಗುಡ್ಡದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಪ್ರಯತ್ನಿಸಲಾಗುತ್ತದೆ. ಕೊಡಗಿನಲ್ಲಿ ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಕ್ಕೆ ಕಾರಣವಾಗಿರುವ ರಸ್ತೆಗಳ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಯ ಉಪವಿಭಾಗೀಯ ಕಚೇರಿಯನ್ನೇ ಮಡಿಕೇರಿಯಲ್ಲಿ ಇಂದಿನಿಂದ ತೆರೆಯಲಾಗುತ್ತಿದೆ. ಇದನ್ನೂ ಓದಿ:ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ- ಸಹಾಯಕ್ಕೆ ಅಂಗಲಾಚುತ್ತಿದ್ದಾರೆ ಜನ

vlcsnap 2018 08 17 08h55m53s37

7 ದಿನಗಳಲ್ಲಿ ರಸ್ತೆ ದುರಸ್ತಿ ಕಾರ್ಯಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡು ಈಗಾಗಲೇ ಸಂಪರ್ಕ ಕಳೆದುಕೊಂಡ ರಸ್ತೆಗಳ ದುರಸ್ತಿ ನಡೆಸಲಾಗುವುದು. ಸಂಚಾರಕ್ಕೆ ಲೋಕೋಪಯೋಗಿ ಇಲಾಖೆ ವತಿಯಿಂದ ಆದ್ಯತೆಯಂತೆ ಕ್ರಮ ಕೈಗೊಳ್ಳಲಾಗುತ್ತದೆ. ಮಳೆ ಕಡಮೆಯಾದ ಕೂಡಲೇ ಹಾಳಾಗಿರುವ ರಸ್ತೆಗಳು, ಗ್ರಾಮೀಣ ಪ್ರದೇಶಗಳಲ್ಲಿ ಕಂಡು ಬಂದಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ.

ಈಗಾಗಲೇ ಸ್ಥಳೀಯರ ನೆರವಿನಿಂದ ಸಂತ್ರಸ್ತರನ್ನು ಮಡಿಕೇರಿಗೆ ಸ್ಥಳಾಂತರಿಸಲಾಗಿದೆ. ನೀರು ಹರಿವು ಹೆಚ್ಚಾಗಿರುವ ಕಡೆಗಳಿಗೆ ತೆರಳಲು ಅಸಾಧ್ಯವಾಗಿರುವ ಸ್ಥಳಗಳಿಗೆ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಬೇಕಿದೆ ಅದರೆ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅ ಸ್ಥಳಗಳಿಗೆ ತಲುಪಲು ಕಷ್ಟಕರವಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 08 17 08h09m14s194

Share This Article
Leave a Comment

Leave a Reply

Your email address will not be published. Required fields are marked *