ಮಡಿಕೇರಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಯೋಧರು ಹಾಗೂ ಸ್ಥಳೀಯರ ತಂಡ ಹಟ್ಟಿಹೊಳೆಯಲ್ಲೇ ಉಳಿಯುವಂತಾಗಿದೆ.
ಇಂದು ಬೆಳಗ್ಗೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಭಾನುವಾರ ಮುಕ್ಕೋಡ್ಲು ಹಾಗೂ ಹಟ್ಟಿಹೊಳೆ ಗ್ರಾಮಗಳ ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದ ಯೋಧರು ಹಾಗೂ ಸ್ಥಳೀಯರು ತಡರಾತ್ರಿ ಹಟ್ಟಿಹೊಳೆಯಲ್ಲೇ ವಾಸ್ತವ್ಯ ಹೂಡಿದ್ದಾರೆ.
ಹಟ್ಟಿಹೊಳೆ ಹಾಗೂ ಮುಕ್ಕೋಡ್ಲು ಗ್ರಾಮಗಳಲ್ಲಿ ಹಲವು ಜನರು ಸಿಲುಕಿರುವ ಸಂಭವವಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಯೋಧರು ತಮ್ಮ ಪ್ರಾಣದ ಹಂಗನ್ನು ತೊರೆದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವರ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.
ಮಾಹಿತಿಗಳ ಪ್ರಕಾರ ಮಳೆಯ ನಡುವೆಯೂ ಯೋಧರು ಸ್ಥಳೀಯರ ನೆರವಿನಿಂದ ಕಾರ್ಯಾಚರಣೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv