ಉಡುಪಿ: ಪೇಜಾವರ ಶ್ರೀ (Pejawar Sri) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ (Cat) ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಮುಚ್ಲಕೋಡು ಬಳಿ ನಡೆದಿದೆ. ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
ಉಡುಪಿ ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ತೆರಳಿದ್ದರು. ಈ ಸಂದರ್ಭದಲ್ಲಿ ಬೆಕ್ಕೊಂದು ಬಾವಿಗೆ ಬಿದ್ದ ವಿಷಯ ತಿಳಿದ ಸ್ವಾಮೀಜಿ, ತಾವೇ ಸ್ವತಃ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್
ಕೂಡಲೇ ಹಿಂದೆ ಮುಂದೆ ನೋಡದೆ ಹಗ್ಗದ ಸಹಾಯದಿಂದ ಸ್ವಾಮೀಜಿ ಬಾವಿಗಿಳಿದಿದ್ದಾರೆ. ಗೋವಿನ ರಕ್ಷಣೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿರುವ ಪೇಜಾವರ ಸ್ವಾಮೀಜಿ ಹಾವು, ಹದ್ದು ಹೀಗೆ ಸಕಲ ಪ್ರಾಣಿ ಪಕ್ಷಿಗಳ ರಕ್ಷಣೆ ಮಾಡುತ್ತಿರುತ್ತಾರೆ. ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಈ ಪ್ರಾಣಿ ಪ್ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು