ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ 33% ಮಹಿಳೆಯರಿಗೆ ಮೀಸಲು ನೀಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ 33% ಮಹಿಳಾ ಅಭ್ಯರ್ಥಿಗಳನ್ನ ಭರ್ತಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಅತೀ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‍ಗೆ ಒತ್ತಾಯ
Advertisement
ಸರ್ಕಾರದ ಸ್ವಾಯತ್ತತೆ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ಸರ್ಕಾರಿ ವಲಯದ ಅಂಗ ಸಂಸ್ಥೆಗಳು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದೆ.