ಬೆಂಗಳೂರು: ರಾಜ್ಯ ಸರ್ಕಾರ ಜಿ.ಪಂ., ತಾ.ಪಂ. ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ (Zilla Panchayat -Taluk Panchayat Election) ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು. ಇದನ್ನೂ ಓದಿ: ಪಾಕಿಸ್ತಾನದ ಹ್ಯಾಂಡ್ಲರ್ ಶಹಜಾದ್ ಭಟ್ಟಿ ಜಾಲದ ಸಂಪರ್ಕ ಶಂಕೆ – ಮೀರತ್ನಲ್ಲಿ ಉಜೈದ್ ಬಂಧನ
2022ರಲ್ಲಿಯೇ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಕೆ.ಆರ್ ಪುರಂ-ದೊಡ್ಡನೆಕ್ಕುಂದಿ ವರೆಗೆ ಟ್ರಯಲ್ ರನ್ ಆರಂಭ; ಶೀಘ್ರವೇ ಮತ್ತೊಂದು ಮೆಟ್ರೋ ಮಾರ್ಗ ಸಂಚಾರಕ್ಕೆ ಮುಕ್ತ
ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದರು. https://erajyapatra.karnataka.gov.in// ನಲ್ಲಿ ಎಲ್ಲ ಅಧಿಸೂಚನೆಗಳೂ ಲಭ್ಯವಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು. ಇದನ್ನೂ ಓದಿ: ಮುಂದಿನ ಸರ್ಕಾರ ಯಾರದ್ದು ಅಂತ ತೀರ್ಮಾನ ಮಾಡೋದು ಜನ, ದೇವೇಗೌಡರು, ರೇವಣ್ಣ ಅಲ್ಲ: ಹೆಚ್.ಸಿ.ಬಾಲಕೃಷ್ಣ
