ಮಂಬೈ: ನಮ್ಮ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ (Reservation) ಮುಂದುವರಿಯಬೇಕು. ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಎಲ್ಲ ರೀತಿಯ ಸಹಕಾರ ಇರಲಿದೆ ಎಂದು ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 1947ರ ನಂತರ ಭಾರತದಿಂದ ಬೇರ್ಪಟ್ಟವರು ಈಗ ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿದ್ದಾರೆ. ಹಾಗಾಗಿ ಇಂದಿನ ಯುವಸಮೂಹ ವೃದ್ಧರಾಗುವಷ್ಟರಲ್ಲಿ ಅಖಂಡ ಭಾರತದ ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ಮೀಸಲಾತಿ ವಿಚಾರವಾಗಿ ಮಾತನಾಡಿದ ಮೋಹನ್ ಭಾಗವತ್, ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮದೇ ಸಹಜೀವಿಗಳನ್ನ ಹಿಂದೆ ಇರಿಸಿದ್ದೇವೆ. ನಾವು ಅವರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ. 2000 ವರ್ಷಗಳ ವರೆಗೆ ಈ ಪ್ರಕ್ರಿಯೆ ಹೀಗೆ ಮುಂದುವರಿದಿದೆ. ಹಾಗಾಗಿ ಸಮಾಜದಲ್ಲಿ ಅಸಮಾನತೆಯನ್ನ ತೊಲಗಿಸುವವರೆಗೆ, ಅಸಮಾನತೆಗೆ (Inequality) ಒಳಗಾದವರ ಪುನಶ್ಚೇತನಕ್ಕಾಗಿ ವಿಶೇಷ ಪರಿಹಾರ ನೀಡಬೇಕು. ಅವುಗಳಲ್ಲಿ ಮೀಸಲಾತಿ ಕೂಡ ಒಂದು. ಆದ್ದರಿಂದ ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಅನ್ನೋದು ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಸಂವಿಧಾನದಲ್ಲಿ (Indian Constitution) ಒದಗಿಸಿರುವ ಮೀಸಲಾತಿಗೆ ಆರ್‌ಎಸ್‌ಎಸ್‌ನಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.
Advertisement
Advertisement
ಸಮಾಜದಲ್ಲಿ ಇಂದಿಗೂ ತಾರತಮ್ಯ ನಿಂತಿಲ್ಲ. ಸಮಾಜದ ಕೆಲವು ವಿಭಾಗಗಳು 2000 ವರ್ಷಗಳಿಂದ ಬಳಲುತ್ತಿದ್ದರೆ, ತಾರತಮ್ಯ ಎದುರಿಸದಿರುವವರು 200 ವರ್ಷಗಳವರೆಗೆ ಸಮಸ್ಯೆಗಳನ್ನ ಎದುರಿಸಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರಗಳನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಿ – ಪಿಐಎಲ್ ವಜಾ
ಈ ಸಂದರ್ಭದಲ್ಲಿ ಅಖಂಡ ಭಾರತದ ಯಾವಾಗ ಅಸ್ತಿತ್ವಕ್ಕೆ ಬರುತ್ತದೆ ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಭಾಗವತ್, ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದ್ರೆ ನೀವೆಲ್ಲ ಅಖಂಡ ಭಾರತ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ರೆ ನೀವು ವಯಸ್ಸಾಗುವುದರೊಳಗೆ ಅದು ಅಖಂಡ ಭಾರತ ಸೃಷ್ಟಿಯಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್
Web Stories