ಹಾಸನ: ಹಾಸ್ಟೆಲ್‌ನ (Hostel) ಅಪ್ರಾಪ್ತ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ (Sexual Harassment) ನೀಡುತ್ತಿದ್ದ ಆರೋಪದಡಿ ವಸತಿ ಶಾಲೆಯ ಪ್ರಾಂಶುಪಾಲನನ್ನು (Principal) ಪೊಲೀಸರು ಬಂಧಿಸಿರುವ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದು, ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.
Advertisement
Advertisement
ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಚಿಕಿತ್ಸೆಗೆಂದು ಬಂದಿದ್ದ ತಾಯಿ, ಮಗಳು – ಆಸ್ಪತ್ರೆಯ ಕಬೋರ್ಡ್‍ನಲ್ಲಿ, ಹಾಸಿಗೆಯ ಕೆಳಗೆ ಶವವಾಗಿ ಪತ್ತೆ
Advertisement
Advertisement
ದೂರು ದಾಖಲಿಸಿಕೊಂಡ ಪೊಲೀಸರು ಪ್ರಾಂಶುಪಾಲ ಶಿವಕುಮಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶಿವಕುಮಾರ್ ಮೂಲತಃ ಕೊಡಗು ಜಿಲ್ಲೆಯವನಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾ ಬ್ಯಾನ್