ಎಂಎಸ್‍ಐಎಲ್ ಮದ್ಯದ ಅಂಗಡಿ ಮುಚ್ಚಿಸಿ- ಗ್ರಾಮಸ್ಥರ ಆಗ್ರಹ

Public TV
1 Min Read
msil mysuru

ಮೈಸೂರು: ಸರ್ಕಾರಿ ಸ್ವಾಮ್ಯದ ಎಂಎಸ್‍ಐಎಲ್ ಮದ್ಯದಂಗಡಿಗಳನ್ನು ಬಂದ್ ಮಾಡಿಸುವಂತೆ ಮೈಸೂರು ತಾಲೂಕಿನ ಶ್ರೀರಾಂಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶ್ರೀರಾಂಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಈಗಾಗಲೇ 6 ಮದ್ಯದಂಗಡಿಗಳಿವೆ. ಇದೀಗ ಎಂಎಸ್‍ಐಎಲ್ ಸಹ ಮದ್ಯದಂಗಡಿ ತೆರೆದಿದ್ದು, ಇದರಿಂದ ಕುಡುಕರ ಹಾವಳಿ ಹೆಚ್ಚಾಗಿದೆ. ಗ್ರಾಮದ ಬಹುತೇಕ ಪುರುಷರು ಕುಡಿತಕ್ಕೆ ದಾಸರಾಗಿದ್ದಾರೆ. ಶಾಲೆ ಹಾಗೂ ಮಸೀದಿಯ ಹತ್ತಿರ ಮದ್ಯದಂಗಡಿ ತೆರೆದಿರುವುದರಿಂದ ನಿವಾಸಿಗಳಿಗೆ ತುಂಬಾ ತೊಂದರೆಯಾಗಿದೆ. ಮಹಿಳೆಯರು ಮಕ್ಕಳು ಈ ಭಾಗದಲ್ಲಿ ಓಡಾಡುವುದು ದುಸ್ತರವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

vlcsnap 2019 12 13 22h38m13s88

ಹೀಗಾಗಿ ಎಂಎಸ್‍ಐಎಲ್ ಮದ್ಯದಂಗಡಿಯನ್ನು ಬಂದ್ ಮಾಡಿಸಿ ಎಂದು ಶ್ರೀರಾಂಪುರ ಗ್ರಾಮಸ್ಥರು ಆಗ್ರಹಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈ ಗೊಳ್ಳುವುದಾಗಿ ಜಿಲ್ಲಾಧಿಕಾರಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *