ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಈಗಷ್ಟೇ ಕರೆ ಮಾಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ತಿಳಿಸಿದೆ. ಈ ವೇಳೆ ಅವರು ಸೋಮವಾರದ ಪ್ರಮಾಣವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Advertisement
ಪ್ರಜಾಪ್ರಭುತ್ವಕ್ಕೆ ಜಯವಾಗಿದೆ. ಅಭಿನಂದನೆಗಳು ಕರ್ನಾಟಕ. ದೇವೇಗೌಡ, ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಇತರರಿಗೆ ಅಭಿನಂದನೆಗಳು. ಇದು ಪ್ರಾದೇಶಿಕ ಪಕ್ಷಕ್ಕೆ ದೊರೆತ ಜಯ ಎಂದು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ.
Advertisement
I just spoke with Kumaraswamy Ji and congratulated him. He invited me for the oath taking ceremony on Monday @hd_kumaraswamy
— Mamata Banerjee (@MamataOfficial) May 19, 2018
Advertisement
ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ನಿಜವಾದ ಗೆಲುವು. ಮುಖ್ಯಮಂತ್ರಿಯಾಗಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ನನಗೆ ಬಹಳ ಸಂತಸ ನೀಡಿದೆ. ನನ್ನ ಸಂತೋಷವನ್ನು ಈ ಮೂಲಕ ವ್ಯಕ್ತಪಡಿಸುತ್ತೇನೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
Democracy wins. Congratulations Karnataka. Congratulations DeveGowda Ji, Kumaraswamy Ji, Congress and others. Victory of the 'regional' front
— Mamata Banerjee (@MamataOfficial) May 19, 2018
Resignation of BS Yeddyurappa as Karnataka's CM is a true victory for democracy. Entire nation is happy with the current turn of events. As a Chief Minister and a firm believer of democracy, I am expressing my happiness.
— N Chandrababu Naidu (@ncbn) May 19, 2018