ಧಾರವಾಡ: ಮೇ 11ಕ್ಕೆ ಸಂಜೆ ಸಭಾಪತಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ ಎಂದು ಸಭಾಪತಿ ಹೊರಟ್ಟಿ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರುವುದು ಇಲ್ಲಿಯವರೆಗೂ ಯಾವುದೇ ಅಧಿಕೃತವಾಗಿಲ್ಲ. ಭಾರತ ಸರ್ಕಾರದ ಗೃಹ ಮಂತ್ರಿಗಳನ್ನ ಭೇಟಿಯಾಗಿದ್ದೆನೆ. ಮಾತುಕತೆಗಳು ಸಹಜವಾಗಿ ಬರುತ್ತವೆ, ಸಭಾಪತಿ ಆಗಿರುವುದರಿಂದ ಬೇರೆ ಪಕ್ಷದ ಬಗ್ಗೆ ಮಾತಾಡಲು ಬರಲ್ಲ. ಮೇ11 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ನೀಡಿ ಮುಂದಿನ ನಡೆ ತಿಳಿಸುತ್ತೆನೆ ಎಂದರು.
ಅಮಿತ್ ಶಾ ಅವರು ನನ್ನ ಬಗ್ಗೆ ಕೇಳಿದ್ದರು, ಒಳ್ಳೆ ಹೆಸರು ಇಟ್ಟುಕೊಂಡಿದ್ದೀರಿ ಎಂದು ಹೇಳಿದರು. ಅವರನ್ನು ಭೇಟಿಯಾಗಿದ್ದು ಖುಷಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಮಿತ್ ಶಾ ಭೇಟಿ – ಹೊರಟ್ಟಿ ಬಿಜೆಪಿಗೆ ಸೇರ್ಪಡೆ
ಪರಿಷತ್ ಚುನಾವಣೆ ಟಿಕೆಟ್ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ. ಮೇ 11ರವರೆಗೂ ಯಾವುದೇ ರಾಜಕೀಯದ ಬಗ್ಗೆ ಮಾತನಾಡಲ್ಲ ಎಂದ ಅವರು, ಬಿಜೆಪಿ ಪಕ್ಷಕ್ಕೆ ಸೇರಿದ ಮೇಲೆ ಟಿಕೆಟ್ ವಿಚಾರ ಮಾಡುವೆ, ರಾಜೀನಾಮೆ ನೀಡಿ ಮುಂದಿನ ನಡೆ ಹೇಳುವೆ ಎಂದರು.