ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಬಿಜೆಪಿ (BJP) ಶಾಸಕ ಸುರೇಶ್ ಕುಮಾರ್, ಭಾರತ ಟಿ20 ವಿಶ್ವಕಪ್ ಗೆಲುವಿನ ವೇಳೆ ಟೀಂ ಇಂಡಿಯಾದ (Team India) ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಸದನದ ಎಲ್ಲಾ ಸದಸ್ಯರು ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಕರ್ನಾಟಕದ ಜನತೆ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!
ಕಳೆದ ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ಗಳ ರೋಚಕ ಗೆಲುವು ಸಾಧಿಸಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ಭಾರತ ನೀಗಿಸಿಕೊಂಡಿತು.
ಫೈನಲ್ ಪಂದ್ಯದಲ್ಲಿ ಗೆಲುವಿಗೆ 177 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲೊಪ್ಪಿಕೊಂಡಿತ್ತು. ಅಲ್ಲದೇ `ಚೋಕರ್ಸ್’ ಹಣೆಪಟ್ಟಿಯೊಂದಿಗೆ ತವರಿಗೆ ಮರಳಿತು. ಇದನ್ನೂ ಓದಿ: ಸೆಟ್ಟೇರಿತು ‘ಅರಸು’ ಡೈರೆಕ್ಟರ್ ಹೊಸ ಸಿನಿಮಾ- ಸ್ಮೈಲ್ ಗುರು ರಕ್ಷಿತ್ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್