ಕಾಶ್ಮೀರದ ವಿಶೇಷ ಸ್ಥಾನಮಾನ, ಅಧಿಕಾರ ರದ್ದು-ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ

Public TV
1 Min Read
amit

ನವದೆಹಲಿ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು. ಪರಿಚ್ಛೇಧ 370 ಮತ್ತು 35(ಎ) ಕೂಡ ಸಹ ರದ್ದು ಮಾಡಲಾಯ್ತು. ಆಡಳಿತಾತ್ಮಕ ದೃಷ್ಟಿಯಿಂದ ಜಮ್ಮು, ಕಾಶ್ಮೀರ ಮತ್ತು ಲಡಾಕ್ ಎಂದು ಮೂರು ವಿಭಾಗಗಳಾಗಿ ವಿಂಗಡನೆ ಮಾಡುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಯ್ತು.

ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಸಾಮಾನ್ಯ ದಿನಕ್ಕಿಂತ ಕಾಶ್ಮೀರದಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇಂದಿನ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸುಮಾರು 40 ನಿಮಿಷಗಳ ಸಂಪುಟ ಸಭೆ ನಡೆಸಲಾಯ್ತು. ಜಮ್ಮು ಮತ್ತು ಕಾಶ್ಮೀರದ ಕುರಿತು ತೆಗೆದುಕೊಳ್ಳುತ್ತಿರುವ ನಿರ್ಣಯದ ಬಗ್ಗೆ ಮೋದಿಯವರು ತಮ್ಮ ಮಿತ್ರಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *