– ಮಂಗ್ಳೂರಲ್ಲಿ ರೆಸಾರ್ಟ್ ವಾಸ್ತವ್ಯಕ್ಕೆ ಪ್ಲಾನ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಕೆಲವೇ ತಿಂಗಳುಗಳ ಹಿಂದೆ ನಡೆದಿದ್ದ ರೆಸಾರ್ಟ್ ರಾಜಕಾರಣ ರಾಜ್ಯದಲ್ಲಿದ್ದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿತ್ತು. ಈಗ ಅದೇ ಮಾದರಿಯಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಸದ್ದಿಲ್ಲದೇ ಸಿದ್ಧತೆ ನಡೆಸಲಾಗುತ್ತಿದ್ದು, 15ಕ್ಕೂ ಹೆಚ್ಚು ಶಾಸಕರು ರೆಸಾರ್ಟಿಗೆ ಶೀಫ್ಟ್ ಆಗಲು ರೆಡಿಯಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಪಕ್ಷದ ಹೈಕಮಾಂಡ್ ದೇವೇಗೌಡರು ನವೆಂಬರ್ 6 ರಂದು ಪಕ್ಷದ ಶಾಸಕರ ಸಭೆ ಕರೆದಿದ್ದಾರೆ. ಕುಮಾರಸ್ವಾಮಿ ಹಾಗೂ ಶಾಸಕರ ನಡುವಿನ ಸಂದಾನ ಸಭೆಗೆ ಹಾಜರಾಗಲ್ಲ ನಾನು ಲಂಡನ್ ಗೆ ಹೋಗುತ್ತಿದ್ದೇನೆ ಎಂದು ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಜೆಡಿಎಸ್ ಶಾಸಕರು ತಮ್ಮ ಒಗ್ಗಟ್ಟು ತೋರಿಸಲು ಮುಂದಾಗಿದ್ದಾರೆ.
Advertisement
Advertisement
ಮಂಗಳೂರು ಸಮೀಪದ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿ ತಮ್ಮ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ. ಜಿ.ಟಿ ದೇವೇಗೌಡ, ಗುಬ್ಬಿ ಶ್ರೀನಿವಾಸ್, ಶರವಣ, ಚೌಡರೆಡ್ಡಿ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ರೆಸಾರ್ಟ್ ನತ್ತ ಮುಖ ಮಾಡಿದ್ದಾರೆ. ಇನ್ನೆರಡು ದಿನದಲ್ಲಿ ಮಂಗಳೂರು ಸಮೀಪದ ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಟಾರ್ಗೆಟ್ 7, ಸೆಂಟಿಮೆಂಟ್ ಡೈಲಾಗ್‍ಗೆ ಜೆಡಿಎಸ್ ರೆಬೆಲ್‍ಗಳು ಥಂಡಾ!
Advertisement
ದೇವೇಗೌಡರು ಕರೆದ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿಯವರು ಗೈರಾಗಲು ಮುಂದಾದರೆ, ಅಸಮಾಧಾನಿತ ಶಾಸಕರು ರೆಸಾರ್ಟಿನಲ್ಲಿ ಕುಳಿತು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಒಟ್ಟಾರೆ ಮಾಜಿ ಸಿಎಂ ಹಾಗೂ ಶಾಸಕರ ನಡುವಿನ ಅಸಮಾಧಾನ ಈಗ ದೇವೇಗೌಡರ ಮಾತಿಗೂ ಶಾಸಕರು ಕ್ಯಾರೇ ಎನ್ನದಂತಾಗಿದೆ ಎಂಬುದಾಗಿ ತಿಳಿದುಬಂದಿದೆ.