ಬೆಂಗಳೂರು: ದೈವ ನರ್ತಕರಿಗೆ ಸರ್ಕಾರ (Government) ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (BT Lalitha Nayak) ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ (UT Khader) ತೀವ್ರವಾಗಿ ಖಂಡಿಸಿದ್ದಾರೆ.
Advertisement
ಈ ಕುರಿತು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ (Karavali) ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಂದಿ ಬಾಕ್ಸಾಫೀಸ್‌ನಲ್ಲಿ ಅಬ್ಬರಿಸಿದ ʻಕಾಂತಾರʼ: 50 ಕೋಟಿ ರೂ. ಗಳಿಸಿದ ರಿಷಬ್ ಚಿತ್ರ
Advertisement
Advertisement
ಬಿ.ಟಿ ಲಲಿತಾ ನಾಯಕ್ ಹೇಳಿದ್ದೇನು?
ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು – ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್
Advertisement
ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು `ಓವ್’ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ. ರಿಷಬ್ ಶೆಟ್ಟಿ (Rishab Shetty) ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.