ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
ಆತ್ಮೀಯರೇ,
ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ.
ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ…
— Basavaraj S Bommai (@BSBommai) October 17, 2023
Advertisement
ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ
Advertisement
ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಮಾಜಿ ಸಿಎಂ ಬರೆದಿದ್ದಾರೆ.
Advertisement
Advertisement
ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ
Web Stories