ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ನಾಲ್ಕು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರೆಗೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಈ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ಇಂದಿನಿಂದ ನ.2 ರ ಸಂಜೆ 6 ಗಂಟೆಯವರೆಗೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ
ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ ಮುಖಾಂತರ ಮಹದೇಶ್ವರ ಬೆಟ್ಟಕ್ಕೆ ತೆರಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಅ.31 ರಿಂದ ನ.2ರ ವರೆಗೆ ದೀಪಾವಳಿ ಹಬ್ಬ ನಡೆಯಲಿದೆ. ದೇಶಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ- ರೈಲ್ವೆ ಇಲಾಖೆ