ನವದೆಹಲಿ: ಅಂಗಡಿಗಳಲ್ಲಿ ಸೇವೆಗಳನ್ನು ಒದಗಿಸುವ ಸಲುವಾಗಿ ಗ್ರಾಹಕರ ವೈಯಕ್ತಿಕ ಸಂಪರ್ಕ ವಿವರಗಳನ್ನು ಕೊಡಲು ಒತ್ತಾಯಿಸದಂತೆ ಗ್ರಾಹಕರ ವ್ಯವಹಾರಗಳ ಸಚಿವಾಲಯವು (Consumer Affairs Ministry) ಚಿಲ್ಲರೆ ವ್ಯಾಪಾರಿಗಳಿಗೆ (Retailers) ಸೂಚನೆ ನೀಡಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಯಾವುದೇ ಅಂಗಡಿಗಳಿಗೆ ಹೋದರೂ ಬಿಲ್ ಕೊಡುವ ಮೊದಲು ಮೊಬೈಲ್ ನಂಬರ್ ಕೊಡುವಂತೆ ಕೇಳುತ್ತಾರೆ. ಗ್ರಾಹಕರು ತಮ್ಮ ವೈಯಕ್ತಿಕ ನಂಬರ್ ಕೊಡಲು ಒಪ್ಪದಿದ್ದಾಗ ಅವರಿಗೆ ಸೇವೆಗಳನ್ನು ಒದಗಿಸಲಿಲ್ಲ ಎಂದು ಹಲವು ಗ್ರಾಹಕರು ದೂರು ನೀಡಿದ್ದರು. ಗ್ರಾಹಕರು ನೀಡಿದ ದೂರಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ
Advertisement
Advertisement
ವೈಯಕ್ತಿಕ ಸಂಪರ್ಕ ವಿವರಗಳನ್ನು ಕೊಡುವವರೆಗೆ ಬಿಲ್ ಕೊಡಲಾಗುವುದಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ. ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿಯಲ್ಲಿ (Consumer Protection Act) ಇದು ನಿರ್ಬಂಧಿತ ವ್ಯಾಪಾರ ಪದ್ಧತಿಯಾಗಿದ್ದು, ಮಾಹಿತಿ ಸಂಗ್ರಹಿಸಲು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಅಲ್ಲದೇ ಗೌಪ್ಯತೆ ಕಪಾಡುವ ಸಲುವಾಗಿ ಚಿಲ್ಲರೆ ಉದ್ಯಮ ಮತ್ತು ಉದ್ಯಮ ಚೇಂಬರ್‌ಗಳಾದ ಸಿಐಐ (CII) ಹಾಗೂ ಎಫ್‌ಐಸಿಸಿಐಗಳಿಗೆ (FICCI) ಸೂಚನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: IT ಕ್ಷೇತ್ರದಲ್ಲಿ ಒಂದೇ ವರ್ಷಕ್ಕೆ 60 ಸಾವಿರ ಜಾಬ್ ಕಟ್
Advertisement
Advertisement
ಬಿಲ್ ಪಡೆದುಕೊಳ್ಳುವ ಸಲುವಾಗಿ ಚಿಲ್ಲರೆ ವ್ಯಾಪಾರಿಗಳಿಗೆ ತಮ್ಮ ಮೊಬೈಲ್ ನಂಬರ್ ನೀಡುವುದು ಭಾರತದಲ್ಲಿ ಕಡ್ಡಾಯವಲ್ಲ. ಈ ರೀತಿ ಮೊಬೈಲ್ ನಂಬರ್ ನೀಡುವುದರಿಂದ ಗ್ರಾಹಕರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಗ್ರಾಹಕರು ಮೊಬೈಲ್ ನಂಬರ್ ನೀಡಲು ಹಿಂಜರಿಯುತ್ತಾರೆ. ಈ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಈ ಸೂಚನೆ ಜಾರಿಗೆ ತರಲಾಗಿದೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ